×
Ad

ಸಚಿವ ಸ್ಥಾನ ಅಲ್ಲ, ಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು ಎಂದ ಆರ್​​.ವಿ ದೇಶಪಾಂಡೆ

Update: 2023-07-15 17:56 IST

ಕಾರವಾರ ಜು.15: 'ಮುಖ್ಯಮಂತ್ರಿ  ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು. ಆ ಕಾರಣಕ್ಕೆ ಸಚಿವ ಸ್ಥಾನ ನೀಡಿಲ್ಲ' ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್​​.ವಿ ದೇಶಪಾಂಡೆ ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ''ಹಿರಿಯ ಶಾಸಕರಾದರೂ ಸಚಿವ ಸ್ಥಾನ ನೀಡದಿರಲು ಕಾರಣ ಏನು?'' ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಮೇಲಿನಂತೆ ಹಾಸ್ಯಭರಿತವಾಗಿ ಉತ್ತರಿಸಿದ್ದಾರೆ.

''ರಾಜ್ಯದಲ್ಲಿ ಗ್ಯಾರಂಟಿಗಳ ಮೂಲಕವೇ ಬಿಜೆಪಿಯನ್ನು ಸೋಲಿಸಿದ್ದೇವೆ. ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದೆ. ವಿರೋಧ ಪಕ್ಷದವರು ಇದನ್ನೆಲ್ಲ ಮೆಚ್ಚಬೇಕು, ಟೀಕೆ ಮಾಡಬಾರದು'' ಎಂದರು.

''ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದು ತಪ್ಪು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಿಸಬಾರದು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆಯುತ್ತೇನೆ'' ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News