ವಿಕಾಸಸೌಧದಲ್ಲಿ ಸದ್ಭಾವನಾ ದಿನ ಆಚರಣೆ; ಅಧಿಕಾರಿಗಳು, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ

Update: 2026-08-20 14:06 IST

ಬೆಂಗಳೂರು: ಸದ್ಭಾವನಾ ದಿನದ ಅಂಗವಾಗಿ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ, ವಿಧಾನ ಪರಿಷತ್ ನ ಸಭಾಪತಿ ಸಲೀಂ ಅಹ್ಮದ್, ವಿಧಾನ ಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರುಗಳು ಸಮ್ಮುಖದಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಈ ಸಂದರ್ಭದಲ್ಲಿ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ ಹಾಗೂ ಸಾಮಾಜಿಕ ಭದ್ರತಾ ವಿಭಾಗದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಗದೀಶ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News