ಸಕಲೇಶಪುರ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತ್ಯು
Update: 2023-07-21 19:46 IST
ಸಕಲೇಶಪುರ (ಹಾಸನ): ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ವರದಿಯಾಗಿದೆ.
ಕಾರು ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದಿ ತಿಳಿದು ಬಂದಿದೆ.
ಮೃತರನ್ನು ಪುರುಷೋತ್ತಮ್, ಜೇತನ್, ಅಶೋಕ್, ದಿನೇಶ್ ಎಂದು ಗುರುತಿಸಲಾಗಿದೆ. ಸದ್ಯ ಮೃತಪಟ್ಟವರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.