×
Ad

ಸಕಲೇಶಪುರ | ಬಾಲಕಿಯ ಅತ್ಯಾಚಾರ ಆರೋಪ: ವೃದ್ಧನ ಬಂಧನ

Update: 2023-09-17 10:47 IST

ಸಕಲೇಶಪುರ: ಸೆ.17: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.  

ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ.

ಈತನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕಿಗೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಬಾಲಮಂದಿರದ ವಶಕ್ಕೆ ನೀಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News