×
Ad

ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ

Update: 2023-08-18 09:51 IST

ಸಕಲೇಶಪುರ : ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು (ಶುಕ್ರವಾರ) ಬೆಳಗ್ಗೆ ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ವರದಿಯಾಗಿದೆ.

ಕೂಲಿ ಕಾರ್ಮಿಕ ಮಹಿಳೆ ಪೂರ್ಣಿಮಾ (40) ಮೃತ ಪಟ್ಟವರು ಎಂದು ತಿಳಿದು ಬಂದಿದೆ. 

ಕಾಡಾನೆ ಮಹಿಳೆಯ ಸೊಂಟದ ಭಾಗಕ್ಕೆ ಬಲವಾಗಿ ತುಳಿದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಹಾಗು ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಮಹಿಳೆ ಮೃತ ಪಟ್ಟಿದ್ದಾರೆನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News