ಶಾಸಕರ ದಿನಾಚರಣೆ; ಸಿಎಂ ಜೊತೆ ಚರ್ಚಿಸಿ ಕ್ರಮ : ಸಭಾಪತಿ ಸಲೀಂ ಅಹ್ಮದ್

Update: 2026-08-18 18:32 IST

ಬೆಂಗಳೂರು : ಮುಂದಿನ ವರ್ಷ ಶಾಸಕರ ದಿನಾಚರಣೆ ಆಚರಿಸಲು ಚಿಂತಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಮಂಗಳವಾರ ಪರಿಷತ್ತಿನ ಕಲಾಪದಲ್ಲಿ ಉಪಸಭಾಪತಿ ಉಮಾಶ್ರೀ ಅವರನ್ನು ಬಿಜೆಪಿ ಸದಸ್ಯ ಡಾ. ಧನಂಜಯ್ ಸರ್ಜಿ ಅಭಿನಂದಿಸುವ ವೇಳೆ ಮಧ್ಯೆಪ್ರವೇಶಿಸಿದ ಸಭಾಪತಿ, 2006ರ ಬಳಿಕ ಶಾಸಕರ ದಿನಾಚರಣೆ ಮಾಡಿಲ್ಲ. ಮುಂದಿನ ವರ್ಷ ಆಚರಿಸಬೇಕೆಂದು ನಿರ್ಧರಿಸಲಾಗಿದೆ ಎಂದರು.

ಮೂರು ದಿನಗಳ ಕಾಲ ಶಾಸಕರ ದಿನಾಚರಣೆ ಕಾರ್ಯಕ್ರಮ ನಡೆಸಲು ಚಿಂತಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಬಜೆಟ್ ಅಧಿವೇಶನ ಅಥವಾ ರಾಜ್ಯಪಾಲರ ಜಂಟಿ ಅಧಿವೇಶನ ಬಳಿಕ ಶಾಸಕರ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದು ಸಲೀಂ ಅಹ್ಮದ್ ಹೇಳಿದರು.

ಶಾಸಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜಕೀಯ ಮಾತ್ರವಲ್ಲದೆ, ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಕೌಶಲ್ಯ ಸೇರಿದಂತೆ ಶಾಸಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಲಾಗುವುದು. ಎಲ್ಲಾ ಶಾಸಕರು ಕಡ್ಡಾಯವಾಗಿ ಭಾಗಿಯಾಗಲು ಸೂಚಿಸಲಾಗುವುದು ಎಂದು ಸಲೀಂ ಅಹ್ಮದ್ ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News