×
Ad

ಸ್ಯಾಂಡಲ್‌ವುಡ್‌ ನಟ ಹರೀಶ್ ರಾಯ್ ನಿಧನ

Update: 2025-11-06 12:33 IST
ಹರೀಶ್‌ ರಾಯ್‌

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಪೋಷಕ ನಟ ಹಾಗೂ ಖಳನಟರಾಗಿ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಇಂದು (ಗುರುವಾರ) ನಿಧನರಾಗಿದ್ದಾರೆ.

ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಥೈರಾಯ್ಡ್ ಕ್ಯಾನ್ಸರ್‌ನಿಂದ ಹೊಟ್ಟೆ ಉಬ್ಬರಗೊಂಡು ಹರೀಶ್ ರಾಯ್ ಅವರು ಗುರುತೇ ಸಿಗದಂತೆ ಆಗಿದ್ದರು. ನಟ ಯಶ್, ದರ್ಶನ್, ಧ್ರುವ ಸರ್ಜಾ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಹರೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ʼಕೆಜಿಎಫ್ ಚಾಚಾʼ ಎಂದೇ ಖ್ಯಾತಿ ಪಡೆದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News