×
Ad

‘ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಪ್ರಸ್ತಾವ’ ಇನ್ನೂ ಚರ್ಚೆಯ ಹಂತದಲ್ಲಿದೆ : ಸಚಿವ ಸಂತೋಷ್ ಲಾಡ್

Update: 2025-06-19 20:42 IST

ಸಂತೋಷ್ ಲಾಡ್

ಬೆಂಗಳೂರು: ಕಾರ್ಮಿಕರ ಕೆಲಸ ಅವಧಿಯನ್ನು 8ಗಂಟೆಯಿಂದ 10 ಗಂಟೆಗೆ ಹೆಚ್ಚಳ ಮಾಡುವ ಪ್ರಸ್ತಾವ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾರ್ಮಿಕ ವರ್ಗದ ಹಿತರಕ್ಷಣೆಗೆ ನಮ್ಮ ಆದ್ಯತೆ. ಯಾವುದೇ ಸಂದರ್ಭದಲ್ಲಿಯೂ ಕಾರ್ಮಿಕರಿಗೆ ಅನಾನುಕೂಲ ಆಗುವಂತಹ ಯಾವುದೇ ತೀರ್ಮಾನಗಳನ್ನು ಸರಕಾರ ಕೈಗೊಳ್ಳುವುದಿಲ್ಲ ಎಂದು ವಿವರಣೆ ನೀಡಿದರು.

ಖಾಸಗಿ ವಲಯದ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 10 ಗಂಟೆಗೆ ಹೆಚ್ಚಳದ ಕುರಿತು ಕೇಂದ್ರ ಸರಕಾರದ ಪ್ರಸ್ತಾವ ಚರ್ಚೆಯ ಹಂತದಲ್ಲಿದೆ. ಈ ಬಗ್ಗೆ ಕಾರ್ಮಿಕ ಸಂಘಟನೆಗಳ ಮುಖಂಡರು, ಕೈಗಾರಿಕೆಗಳ ಪ್ರತಿನಿಧಿಗಳ ಜತೆಗೆ ಚರ್ಚಿಸಿದ ಬಳಿಕ ಸರಕಾರದ ಹಂತದಲ್ಲಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಸಂತೋಷ್ ಲಾಡ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News