ಸಿಎಂ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಕಿ : ಸತೀಶ್ ಜಾರಕಿಹೊಳಿ
Update: 2025-07-10 18:52 IST
ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಕಾಂಗ್ರೆಸ್‍ನಲ್ಲಿ ನಾಯಕತ್ವ, ಸಿಎಂ ಬದಲಾವಣೆ ವಿಚಾರಕ್ಕೆ ಇತಿಶ್ರೀ ಹಾಡಬೇಕು. ಜತೆಗೆ, ಸಿಎಂ ಬದಲಾವಣೆ ಎಲ್ಲಿಯೂ ಚರ್ಚೆಯೇ ಆಗಿಲ್ಲ. ಅಧಿಕಾರ ಹಂಚಿಕೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರ ಮುಂದೆ ಎಲ್ಲ ಶಾಸಕರು ಅನುದಾನದ ಕುರಿತು ಬೇಡಿಕೆ ಮಾಡಿರಬಹುದು. ಅದರಲ್ಲಿ ಕೇವಲ ಶೇ.10ರಷ್ಟು ಮಂದಿ ನಾಯಕತ್ವದ ಬದಲಾವಣೆ ಬಗ್ಗೆ ಮಾತಾಡಿರಬಹುದು ಎಂದರು.
ಮುಖ್ಯಮಂತ್ರಿ ಆಯ್ಕೆ ಮಾಡುವಾಗ ಮತ ಚಲಾವಣೆ ಆಗಿತ್ತು. ಅದರಂತೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದ್ದಾರೆ. ಹೀಗಾಗಿ ಸಿಎಂ ಬೆಂಬಲಕ್ಕೆ ಹೆಚ್ಚು ಶಾಸಕರಿದ್ದಾರೆ. ಚರ್ಚೆ, ಬದಲಾವಣೆ ಹೀಗೆ ಇದಕ್ಕೆಲ್ಲ ಇತಿಶ್ರೀ ಹಾಡಬೇಕು. ಅದಕ್ಕೆ ಸಿಎಂ ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ ಎಂದು ನುಡಿದರು.