×
Ad

ಧರ್ಮಸ್ಥಳದ ಪ್ರಕರಣ | ‘ಎಸ್‍ಐಟಿ’ ಆಕ್ಷೇಪ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಿತ್ತು: ಸತೀಶ್ ಜಾರಕಿಹೊಳಿ

Update: 2025-08-29 21:00 IST

ಬೆಂಗಳೂರು, ಆ.29: ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ನಡೆಸುತ್ತಿರುವ ತನಿಖೆಯೇ ತಪ್ಪು ಎನ್ನುವುದಾದರೆ, ಅದನ್ನು ವಿರೋಧಿಸುತ್ತಿರುವವರು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ನೀಡಿದ ಆದೇಶದ ಹಿನ್ನೆಲೆಯಲ್ಲಿ ಸರಕಾರ ಎಸ್‍ಐಟಿ ರಚನೆ ಮಾಡಿದೆ. ನಮ್ಮ ಸರಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಬೇರೆ ಯಾವುದೆ ವಿಚಾರಗಳಿಲ್ಲ. ಆದುದರಿಂದಲೆ, ಅನಗತ್ಯವಾಗಿ ಧರ್ಮಸ್ಥಳದ ವಿಚಾರದಲ್ಲಿ ವಿವಾದ ಎಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣೆ ಸಂದರ್ಭದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದನ್ನು ಸಹಿಸಿಕೊಳ್ಳದೆ ಅಪಪ್ರಚಾರಗಳನ್ನು ಮಾಡಿದರು. ಆದರೆ, ರಾಜ್ಯದ ಜನ ಅವರ ಮಾತುಗಳಿಗೆ ಕಿವಿಗೊಡಲಿಲ್ಲ. ಈಗ ಧರ್ಮಸ್ಥಳದ ವಿಷಯವನ್ನು ಮುಂದಿಟ್ಟುಕೊಂಡು ಸರಕಾರವನ್ನು ಟೀಕಿಸುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News