ʼಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಬರಲಿದೆ : ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮೀ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಎಲ್ಲಿಯೂ ಹೋಗಿಲ್ಲ. ಇದರನ್ನು ಯಾರು ದುರ್ಬಳಕೆ ಮಾಡಿಕೊಂಡಿಲ್ಲ. ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಾದರೂ ನಾಪತ್ತೆಯಾದರೆ ಆದಾಯ ತೆರಿಗೆ ಇಲಾಖೆಯವರು ಸುಮ್ಮನೆ ಬಿಡುತ್ತಾರೆಯೇ?. ಆದರೂ, ಈ ಗೊಂದಲದ ಬಗ್ಗೆ ಹಣಕಾಸು ಇಲಾಖೆ ಹಾಗೂ ಸಂಬಂಧಪಟ್ಟ ಮಂತ್ರಿಗಳು ಶೀಘ್ರವೇ ಸ್ಪಷ್ಟೀಕರಣ ನೀಡಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಂತರಿಕ ಗೊಂದಲಗಳ್ನು ನೀವು ನೀವೇ ಬಗೆಹರಿಸಿಕೊಳ್ಳಿ ಎಂದು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಆದರೆ ಆ ಮಾತು ನಮಗಲ್ಲ, ಅದು ಕ್ಯಾಪ್ಟನ್ ಮತ್ತು ವೈಸ್ ಕ್ಯಾಪ್ಟನ್ ಹೈಕಮಾಂಡ್ ಅವರಿಗೆ ಹೇಳಿದ್ದಾರೆಂದು ಎಂದು ಮಾರ್ಮಿಕವಾಗಿ ನುಡಿದರು.
ಜ.25 ರಂದು ನಡೆಯಲಿರುವ ಅಹಿಂದ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಅಹಿಂದ ಎನ್ನುವುದು ನಮ್ಮ ಶಕ್ತಿ. ಇದನ್ನು ಮಾಡಲು ನಮಗೆ ಯಾರ ಪ್ರಮಾಣ ಪತ್ರ ಬೇಕಿಲ್ಲ. ಸಮಾವೇಶ ಯಾರೇ ಮಾಡಿದರೂ ನಮ್ಮ ಅಭ್ಯಂತರವಿಲ್ಲ ಎಂದರು.