×
Ad

ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನಪಡಿಸುವ ಸಾಮರ್ಥ್ಯ ಪಕ್ಷಕ್ಕೆ ಇದೆ, ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ : ಸತೀಶ್ ಜಾರಕಿಹೊಳಿ

Update: 2026-06-05 20:44 IST

ಬೆಂಗಳೂರು : ‘ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನು ನೀಡಿದ್ದು, ನನಗೆ ಯಾವುದೇ ನೋವು-ಸಂತೋಷ ಇಲ್ಲ, ದುಃಖವೂ ಇಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಆದರೆ, ಅವರನ್ನು ಸಮಾಧಾನಪಡಿಸುವ ಸಾಮರ್ಥ್ಯ ನಮ್ಮ ಪಕ್ಷಕ್ಕೆ ಇದ್ದು, ಇನ್ನೂ ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜಕಾರಣದಲ್ಲಿ ಉನ್ನತ ಹುದ್ದೆಗಳ ಬಯಕೆ ಸಹಜ. ಆದರೆ ಎಲ್ಲರಿಗೂ ಉನ್ನತ ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ. ಕೆಲವರಿಗೆ ಮಾತ್ರ ಅದು ಲಭ್ಯವಾಗುತ್ತದೆ. ಈ ಎಲ್ಲ ಗೊಂದಲಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಗೆಹರಿಸಲಿದ್ದಾರೆ, ಅಲ್ಲಿಯವರೆಗೆ ಕಾಯಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಆಸೆ ಇತ್ತು, ಸಿಗಲಿಲ್ಲ. ಸಿಕ್ಕಿದ್ದಕ್ಕೆ ತೃಪ್ತಿಪಡಬೇಕು. ರಾಜೀನಾಮೆ ಏಕೆ ನೀಡಬೇಕು. ಅದರ ಅವಶ್ಯಕತೆ ನನಗೆ ಇಲ್ಲ. ನನಗೆ ನೀಡಿರುವ ಲೋಕೋಪಯೋಗಿ ಖಾತೆಯಲ್ಲೇ ಮುಂದುವರೆದು ಜನಪರವಾಗಿ ಕೆಲಸ ಮಾಡಲಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News