×
Ad

ಸಂಪುಟ ವಿಸ್ತರಣೆಯಾದರೆ ಸ್ವಲ್ಪ ಮಟ್ಟಿಗೆ ಸರಕಾರ ಅಲುಗಾಡಬಹುದು: ಸಚಿವ ಸತೀಶ್ ಜಾರಕಿಹೊಳಿ

Update: 2026-07-08 22:35 IST

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಾದರೆ ಸ್ವಲ್ಪ ಮಟ್ಟಿಗೆ ಸರಕಾರ ಅಲುಗಾಡಬಹುದು. ಆದರೆ, ಇದು ಹೆಚ್ಚು ಪರಿಣಾಮ ಇರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚರ್ಚೆ ಮಾಡುವ ಅಗತ್ಯ ಇಲ್ಲ. ಅಲ್ಲಿ ನಾವು ಯಾರನ್ನೂ ಗುರಿ ಮಾಡುತ್ತಿಲ್ಲ. ಕೆಲ ಜವಾಬ್ದಾರಿಗಳ ಹಿನ್ನೆಲೆಯಲ್ಲಿ ತಾವು ಆ ಕ್ಷೇತ್ರಕ್ಕೆ ಭೇಟಿ ಮಾಡಿದ್ದು ನಿಜ. ಚುನಾವಣೆ ಬಂದಾಗ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ವಿವರಣೆ ನೀಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News