×
Ad

ವಾಲ್ಮೀಕಿ ನಿಗಮದಲ್ಲಿ ಹಗರಣ | ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಈ.ಡಿ.

Update: 2024-07-23 13:12 IST

Photo: Facebook/ED

ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ತನಿಖೆ ವೇಳೆ ಸಿಎಂ, ಮಾಜಿ‌ ಸಚಿವರ ಹೆಸರು ಹೇಳುವಂತೆ ಒತ್ತಡ ಹಾಕಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದ(ಈ.ಡಿ) ಅಧಿಕಾರಿಗಳ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ಈ.ಡಿ ಹೈಕೋರ್ಟ್ ಮೆಟ್ಟಿಲೇರಿದೆ.

ಈ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಈ.ಡಿ ಪರ ಹಿರಿಯ ವಕೀಲ ಮಧುಕರ್ ದೇಶಪಾಂಡೆ ವಾದ ಮಂಡಿಸಿ, ಈ.ಡಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಎಫ್ಐಆರ್ ದಾಖಲಿಸಲಾಗಿದೆ. ಯಾವುದೇ ಪ್ರಾಥಮಿಕ ವಿಚಾರಣೆ ನಡೆಸದೇ ಈ.ಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ.ಡಿ ಅಧಿಕಾರಿಗಳ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದರು. ಹೀಗಾಗಿ ಇಂದು ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News