×
Ad

ವಾಲ್ಮೀಕಿ ನಿಗಮದಲ್ಲಿ ಹಗರಣ | ಈಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಮಧ್ಯಂತರ ತಡೆ

Update: 2024-07-23 17:33 IST

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ತನಿಖೆ ವೇಳೆ ಸಿಎಂ, ಮಾಜಿ‌ ಸಚಿವರ ಹೆಸರು ಹೇಳುವಂತೆ ಒತ್ತಡ ಹಾಕಿದ ಆರೋಪ ಎದುರಿಸುತ್ತಿರುವ ಈಡಿ ಅಧಿಕಾರಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ‌.

ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಈಡಿ ಡೆಪ್ಯುಟಿ ಡೈರೆಕ್ಟರ್ ಮನೋಜ್ ಮಿತ್ತಲ್, ಅಸಿಸ್ಟೆಂಟ್ ಡೈರೆಕ್ಟರ್ ಮುರಳಿ ಕಣ್ಣನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News