×
Ad

ದ್ವಿತೀಯ ಪಿಯುಸಿ ಪರೀಕ್ಷೆ : 96.75ರಷ್ಟು ವಿದ್ಯಾರ್ಥಿಗಳು ಹಾಜರು, 17,184 ವಿದ್ಯಾರ್ಥಿಗಳು ಗೈರು

Update: 2025-03-01 22:04 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯಾದ್ಯಂತ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಿದ್ದು, ಶನಿವಾರದಂದು ನಡೆದ ಕನ್ನಡ ಹಾಗೂ ಅರೇಬಿಕ್ ಭಾಷಾ ಪರೀಕ್ಷೆಗೆ 17,184 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.96.75ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ.

ರಾಜ್ಯಾದ್ಯಂತ ಪರೀಕ್ಷೆಗೆ 5,28,600 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,11,416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 17,184 ವಿದ್ಯಾರ್ಥಿಗಳು ಗೈರಾಗಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ ಶೇ.99.60ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 38 ಮಂದಿ ಗೈರಾಗಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಶೇ.99.44ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 225 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಶೇ.99.38ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 133 ಮಂದಿ ಗೈರಾಗಿದ್ದಾರೆ.

ವಿಜಯಪುರದಲ್ಲಿ 1,358, ಕಲಬುರಗಿಯಲ್ಲಿ 1,218, ರಾಯಚೂರಿನಲ್ಲಿ 1,186, ಬೀದರ್‌ನಲ್ಲಿ 1,167, ಬಳ್ಳಾರಿಯಲ್ಲಿ 1,022, ತುಮಕೂರಿನಲ್ಲಿ 909 ಮಂದಿ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News