×
Ad

ದ್ವಿತೀಯ ಪಿಯುಸಿ ಪರೀಕ್ಷೆ: ಇಂಗ್ಲೀಷ್ ಪರೀಕ್ಷೆಗೆ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು

Update: 2024-03-13 17:43 IST

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿದ್ದು, ಬುಧವಾರದಂದು ನಡೆದ ಇಂಗ್ಲೀಷ್ ಭಾಷೆ ಪರೀಕ್ಷೆಯಲ್ಲಿ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಪರೀಕ್ಷೆಗೆ 6,64,395 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 6,43,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20,736 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಶೇ.96.88ರಷ್ಟು ಹಾಜರಾತಿ ದಾಖಲಾಗಿದೆ. ಮೈಸೂರು ಜಿಲ್ಲೆಯಲ್ಲಿ 2346 ವಿದ್ಯಾರ್ಥಿಗಳು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 1,183, ವಿಜಯಪುರ ಜಿಲ್ಲೆಯಲ್ಲಿ 1,123, ಕಲಬುರಗಿ ಜಿಲ್ಲೆಯಲ್ಲಿ 1,225, ರಾಯಚೂರು ಜಿಲ್ಲೆಯಲ್ಲಿ 1,197 ವಿದ್ಯಾರ್ಥಿಗಳು ಗೈರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News