×
Ad

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಆಂಗ್ಲ ಭಾಷಾ ಪರೀಕ್ಷೆಯಲ್ಲಿ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು

Update: 2023-08-26 21:17 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.26: ದ್ವಿತೀಯ ಪಿಯುಸಿ ಎರಡನೆ ಬಾರಿಯ ಪೂರಕ ಪರೀಕ್ಷೆಯು ನಡೆಯುತ್ತಿದ್ದು, ದ್ವಿತೀಯ ಭಾಷೆ ಆಂಗ್ಲ ಪರೀಕ್ಷೆಯು ಶನಿವಾರದಂದು ನಡೆಯಿತು. ರಾಜ್ಯಾದ್ಯಂತ ಪರೀಕ್ಷೆಗೆ 5179 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ.

ಪರೀಕ್ಷೆಗೆ 60,085 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 54,906 ವಿದ್ಯಾರ್ಥಿಗಳು ಹಾಜರಾಗಿದ್ದರು. ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದು, ನೋದಣಿಯಾದ 2,369 ವಿದ್ಯಾರ್ಥಿಗಳ ಪೈಕಿ 554 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನು ಬಳ್ಳಾರಿಯಲ್ಲಿ 342, ಚಿಕ್ಕೋಡಿಯಲ್ಲಿ 331 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News