×
Ad

ಕನ್ನಡದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Update: 2024-10-14 12:06 IST

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. 

ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ. ಡಾ. ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ "ರುದ್ರಿ" ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. 

ಇಂದು ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News