×
Ad

ಹಿರಿಯ ಸಾಹಿತಿ ದೇವನೂರ ಮಹಾದೇವರಿಗೆ ‘ವೈಕಂ’ ಪ್ರಶಸ್ತಿ

Update: 2024-12-10 14:14 IST

PC: x.com/anil_nanjangud

ಚೆನ್ನೈ: ನಾಡಿನ ಚಿಂತಕ, ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರಕಾರ ಪ್ರತಿಷ್ಠಿತ ವೈಕಂ ಪ್ರಶಸ್ತಿ ಘೋಷಿಸಿದೆ.

ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ʼವೈಕಂʼ ಪ್ರಶಸ್ತಿ ನೀಡಲಾಗುವುದು ಎಂದು ಕಳೆದ ವರ್ಷ ವೈಕಂ ಸತ್ಯಾಗ್ರಹ ಶತಮಾನೋತ್ಸವದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದರು. ಅದರಂತೆ ಪ್ರಸ್ತುತ ಸಾಲಿನ ಪ್ರಶಸ್ತಿಗೆ ದೇವನೂರ ಮಹಾದೇವ ಭಾಜರಾಗಿದ್ದಾರೆ.

ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರಕಾರ ಘೋಷಿಸಿರುವ ಪ್ರಶಸ್ತಿಯಾಗಿದ್ದು, ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಮಹಾದೇವ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2011ರಲ್ಲಿ ಪದಶ್ರೀ ಪ್ರಶಸ್ತಿ ಲಭಿಸಿದೆ.

ದೇವನೂರ ಮಹಾದೇವ ಅವರ ಕುಸುಮಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಇದಲ್ಲದೇ ಎದೆಗೆ ಬಿದ್ದ ಅಕ್ಷರ, ಆರೆಸೆಸ್ಸ್ ಆಳ ಮತ್ತು ಅಗಲ, ಒಡಲಾಳ ಮೊದಲಾದ ಪುಸ್ತಕಗಳು ಮಹಾದೇವ ಅವರ ಕೃತಿಗಳಲ್ಲಿ ಪ್ರಮುಖವಾದವುಗಳಾಗಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News