ಡಿ.8 ರಿಂದ 19ರ ವರೆಗೆ ʼಚಳಿಗಾಲದ ಅಧಿವೇಶನʼ ಸಾಧ್ಯತೆ
Update: 2025-09-28 17:18 IST
ಬೆಂಗಳೂರು, ಸೆ.28 : ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವು ಡಿ.8 ರಿಂದ 19ರವರೆಗೆ ನಡೆಯುವ ಸಾಧ್ಯತೆಯಿದೆ.
ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯೂ ಸ್ಪೀಕರ್ ಹಾಗೂ ಸಭಾಪತಿ ಈ ಕುರಿತು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ವಿಧಾನಸಭೆ ಹಾಗೂ ವಿಧಾನಪರಿಷತ್ ಅಧಿಕಾರಿಗಳು, ಬೆಳಗಾವಿ ಜಿಲ್ಲಾಡಳಿತಕ್ಕೂ ಅಗತ್ಯ ಸಿದ್ಧತೆಗಳನ್ನು ಆರಂಭಿಸಿಕೊಳ್ಳುವಂತೆ ಸ್ಪೀಕರ್ ಹಾಗೂ ಸಭಾಪತಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.