×
Ad

ನನ್ನ ಸುದ್ದಿಗೆ ಬಂದವರ ಸೆಟಲ್‌ಮೆಂಟ್ ಆಗಿದೆ;‌ ಈಶ್ವರಪ್ಪ ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ತಿರುಗೇಟು

Update: 2023-09-20 22:57 IST

ಹೊಸದಿಲ್ಲಿ, ಸೆ. 20: ನನ್ನ ಸುದ್ದಿಗೆ ಬಂದವರದ್ದು ಒಂದೊಂದೆ ಸೆಟಲ್‌ಮೆಂಟ್ ಆಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಕೆ.ಎಸ್.ಈಶ್ವರಪ್ಪ ತಮ್ಮನ್ನು ‘ನೀರಿನ ಕಳ್ಳ’ ಎಂದು ಟೀಕಿಸಿರುವ ಕುರಿತು ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ಗಮನ ಸೆಳೆದಾಗ ಡಿ.ಕೆ.ಶಿವಕುಮಾರ್ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಈಗ ಈಶ್ವರಪ್ಪ ಅವರು ಎಲ್ಲಿದ್ದಾರೆ? ನಾನೆಲ್ಲಿ ಇದ್ದೀನಿ? ವಿಧಾನಸಭೆಯಲ್ಲಿ ನನ್ನ ಅಪ್ಪನ ಬಗ್ಗೆ ಮಾತನಾಡಿದ್ದರು. ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ, ತೆಗೆದುಕೊಳ್ಳಲಿ ಎಂದು ಅವರು ಹೇಳಿದರು.

ಈಶ್ವರಪ್ಪ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಕಾವೇರಿ ನೀರನ್ನು ಒತ್ತೆ ಇಟ್ಟಿದ್ದಾರೆ, ಅವರು ‘ನೀರಿನ ಕಳ್ಳ’ ಎಂದು ಜರೆದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News