×
Ad

ಲೈಂಗಿಕ ಹಗರಣ | ಮೇ.3 ರಂದು ವಿದೇಶದಿಂದ ಪ್ರಜ್ವಲ್​ ರೇವಣ್ಣ ರಾಜ್ಯಕ್ಕೆ ವಾಪಸ್​?

Update: 2024-05-01 13:08 IST

ಬೆಂಗಳೂರು : ಲೈಂಗಿಕ ಹಗರಣ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ನಾಳಿದ್ದು, ಅಂದರೆ ಮೇ.3 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಪ್ರಜ್ವಲ್ ಜರ್ಮನಿ ಪ್ರವಾಸದಲ್ಲಿದ್ದು, ಮೇ.3ರ ತಡರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ. ಇತ್ತೀಚಿಗೆ ಜರ್ಮನಿ ದೇಶಕ್ಕೆ ಹೋಗಿದ್ದ ಪ್ರಜ್ವಲ್ ರೇವಣ್ಣ, ಬೆಂಗಳೂರಿಗೆ ವಾಪಸ್ಸು ಆಗುವ ಕುರಿತು ಟಿಕೆಟ್ ಬುಕ್ ಮಾಡಿದ್ದಾರೆ. ಅದರ ಮಾಹಿತಿಯಂತೆ ಶುಕ್ರವಾರ ಮಧ್ಯರಾತ್ರಿ 1 ಗಂಟೆಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News