×
Ad

56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ...: ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ

Update: 2023-07-20 17:36 IST

ಬೆಂಗಳೂರು: ಕುಕಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಣಿಪುರಿ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿದ್ದೇ ಅಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ಆಘಾತಕಾರಿ ವೀಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 

ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಹು ಭಾಷಾ ನಟ ಕಿಶೋರ್ ಕುಮಾರ್ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 

''ಕೇವಲ ಮತ ​​ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ ... ನೀವು ಈಗಲಾದರೂ ನಿಮ್ಮ ಬಾಯಿ ತೆರೆದು ಈ ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ, ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ.. '' ಎಂದು ಆಕ್ರೋಶ ಹೊರ ಹಾಕಿದ್ದಾರೆ. 

''ಹೌದು, ನಿಮ್ಮಿಂದ ನಾವು ಏನನ್ನಾದರೂ ನಿರೀಕ್ಷಿಸಲು ಹೇಗೆ ಸಾಧ್ಯ? ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬೆಂಬಲಿಸಿದವರು ನೀವೇ ಅಲ್ಲವೇ? ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬಿಡುಗಡೆ ಮಾಡಿ ಸಂಭ್ರಮಿಸಿದವರು ನೀವೇ ಅಲ್ಲವೇ? ಹಾತ್ರಸ್ ನ ದಲಿತ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿ ಮುಗಿಸಿದವರು ನೀವೇ ಅಲ್ಲವೇ???? '' ಎಂದು ಪ್ರಶ್ನೆ ಮಾಡಿದ್ದಾರೆ. 

''ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ..ನಿಮ್ಮ ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿ…. '' ಎಂದು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News