×
Ad

ಶಿವಮೊಗ್ಗ: ಅಡಿಕೆ ತೋಟದಲ್ಲಿ ಗಾಂಜಾ ಬೆಳೆದ ಆರೋಪಿಗಳಿಬ್ಬರ ಬಂಧನ

Update: 2023-08-10 17:41 IST

ಶಿವಮೊಗ್ಗ, ಆ.10: ಅಡಿಕೆ ತೋಟದಲ್ಲಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.

ಸುನಿಲ್ (34) ಮತ್ತು ಕಾರ್ತಿಕ್ (29) ಬಂಧಿತ ಆರೋಪಿತಗಳು ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಇನ್ಸ್‌ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್‌ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News