×
Ad

ಶಿವಮೊಗ್ಗ-ಬೆಂಗಳೂರು ವಿಮಾನ: ರಿಯಾಯಿತಿ ದರದಲ್ಲಿ ಸಂಚರಿಸಲು ಅವಕಾಶ !

Update: 2023-08-31 23:07 IST

ಬೆಂಗಳೂರು: ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನದ ಮೂಲಕ ಪ್ರಯಾಣಿಸುವ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರದವತಿಯಿಂದ 500 ರಿಯಾಯತಿ ದೊರೆಯಲಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಎಂ‌.ಬಿ.ಪಾಟೀಲ್‌,  ʼʼವಿಮಾನಯಾನ ಸುಲಭವಾಗಿ ಲಭ್ಯವಾಗಬೇಕು ಎನ್ನುವುದು ರಾಜ್ಯ ಸರಕಾರದ ಚಿಂತನೆಯಾಗಿದೆ. ಹೀಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಥಳದಲ್ಲೇ ಟಿಕೆಟ್‌ ಖರೀದಿಗೆ ಅವಕಾಶವಿದ್ದು, ಪ್ರತಿಯೊಬ್ಬ ಪ್ರಯಾಣಿಕರಿಗೂ ಸರಕಾರದ ವತಿಯಿಂದ ಮುಂದಿನ ಒಂದು ವರ್ಷ ಕಾಲ 500 ರೂ. ಸಬ್ಸಿಡಿ ನೀಡಲಾಗುತ್ತದೆ. ಇದರಿಂದ ಸಾಮಾನ್ಯರು ಕೂಡ ವಿಮಾನದಲ್ಲಿ ಪ್ರಯಾಣಿಸಲು ಉತ್ತೇಜನ ನೀಡಿದಂತಾಗುತ್ತದೆʼʼ ಎಂದು ಪಾಟೀಲ ವಿವರಿಸಿದರು.

ವಿಮಾನಸೇವೆ ಲಭ್ಯತೆಯ ವಿವರ

ಇಂಡಿಗೋ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ 11.25ಕ್ಕೆ ಹೊರಟು 12.25ಕ್ಕೆ ಬೆಂಗಳೂರನ್ನು ತಲುಪಲಿದೆ. ಅಲ್ಲಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ಹೊರಡಲಿರುವ ಇಂಡಿಗೋ ವಿಮಾನಗಳನ್ನು ಹಿಡಿಯಬಹುದು. ಈ ಸೇವೆಯು ಸೆ.10ರಿಂದ ಲಭ್ಯವಾಗಲಿದೆ. ಇದೇ ರೀತಿಯಲ್ಲಿ ಬೆಂಗಳೂರಿನ ಕಡೆಯಿಂದ ಇದೇ ವಿಮಾನವು ಪ್ರತಿದಿನ ಬೆಳಿಗ್ಗೆ 9.55ಕ್ಕೆ ಹೊರಟು 11.05ಕ್ಕೆ ಶಿವಮೊಗ್ಗದಲ್ಲಿ ಇಳಿಯಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News