×
Ad

ಶಿವಮೊಗ್ಗ: ಕೇರಳ ಮೂಲದ ಕೂಲಿ ಕಾರ್ಮಿಕನ ಹತ್ಯೆ; ಓರ್ವನ ಬಂಧನ

Update: 2023-12-06 16:29 IST

ಶಿವಮೊಗ್ಗ(ಡಿ.06):ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕೂಲಿ ಕಾರ್ಮಿಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಸೊರಬ ತಾಲೂಕಿನ ರಬ್ಬರ್ ತೋಟವೊಂದರಲ್ಲಿ ಬುಧವಾರ ನಡೆದಿದೆ.

ಕೇರಳದ ಕಣ್ಣೂರಿನ ಶಿಜು (42) ಹತ್ಯೆಯಾದ ವ್ಯಕ್ತಿ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗುತ್ತಿದೆ.

ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ಆತ ಕೂಡ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಮೇಲ್ನೋಟಕ್ಕೆ ಇದು ವೈಯಕ್ತಿಕ ವಿಚಾರಕ್ಕೆ ನಡೆದ ಕೊಲೆ ಎಂದು ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News