×
Ad

ಶಿವಮೊಗ್ಗ: ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರಿಂದ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್‌

Update: 2023-08-21 11:57 IST

ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿ, ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು.

ರವಿವಾರ ತಡರಾತ್ರಿ ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು. ಅಲ್ಲದೆ ಗಾಂಧಿ ಪ್ರತಿಮೆ ಮುಂಭಾಗ ರಸ್ತೆ ತಡೆ ನಡೆಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News