×
Ad

ಶಿವಮೊಗ್ಗ | ಒಂಟಿ ಮಹಿಳೆಯ ಹತ್ಯೆ ಪ್ರಕರಣ: 6 ಮಂದಿ ಆರೋಪಿಗಳ ಬಂಧನ

Update: 2023-06-29 16:53 IST

ಕಮಲಮ್ಮ- ಕೊಲೆಗೀಡಾದ ಮಹಿಳೆ  

ಶಿವಮೊಗ್ಗ, ಜೂ.29: ಇಂಜಿನಿಯರ್ ಪತ್ನಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಜೂ.17ರಂದು ಶಿವಮೊಗ್ಗದ ವಿಜಯನಗರದಲ್ಲಿ ಒಂಟಿ ಮಹಿಳೆಯ ಹತ್ಯೆ ಮಾಡಿ, 35 ಲಕ್ಷ ರೂ. ಹಣ ದೋಚಿದ್ದರು.

ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ವಿಜಯನಗರದ 2ನೇ ತಿರುವಿನಲ್ಲಿರುವ ನೀರಾವರಿ ಇಲಾಖೆ ಇಂಜಿನಿಯರ್ ಮನೆಗೆ ನುಗ್ಗಿದ್ದ ಆರೋಪಿಗಳು, ಇಂಜಿನಿಯರ್ ಪತ್ನಿ ಕಮಲಮ್ಮ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ತನಿಖೆ ನಡೆಸಿದ ತುಂಗಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News