×
Ad

ಶಿವಮೊಗ್ಗ | ಮರ ಬಿದ್ದು ಮನೆಗೆ ಹಾನಿ; ದಂಪತಿ ಪ್ರಾಣಾಪಾಯದಿಂದ ಪಾರು

Update: 2023-11-06 16:59 IST

ಶಿವಮೊಗ್ಗ, ನ.6: ರವಿವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.

ರವಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಹೆಚ್. ಕುನ್ನೂರು ಗ್ರಾಮದ ತಿಮ್ಮಪ್ಪ ಎಂಬುವವರ ಮನೆ ಮೇಲೆ ಮನೆ ಪಕ್ಕದಲ್ಲಿದ್ದ ಬೃಹತ್ ಆಕಾರದ ಮರ ಬುಡ ಸಮೇತವಾಗಿ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಈ ಘಟನೆಯಲ್ಲಿ ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿ ಸಣ್ಣ-ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಮನೆಯಲ್ಲಿದ್ದ ಟಿವಿ ಸೇರಿದಂತೆ ದವಸ, ಧಾನ್ಯಗಳು, ಆಹಾರ ಪದಾರ್ಥಗಳು ಸೇರಿದಂತೆ ಇನ್ನಿತರ ವಸ್ತುಗಳು ನೀರುಪಾಲಾಗಿದ್ದು ಮೇಲ್ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್, ಹೆಂಚುಗಳು ಸೇರಿದಂತೆ ಭಾಗಶಃ ಮನೆ ಜಖಂಗೊಂಡಿದೆ. 

ವಿಷಯ ತಿಳಿಯುತ್ತಿದ್ದಂತೆ ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಸದಸ್ಯ ಮಂಜಪ್ಪ, ಪಿಡಿಒ ನಾಗರಾಜ್, ತಾಪಂ ಮಾಜಿ ಸದಸ್ಯ ಚಂದ್ರಮೌಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News