ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ
Update: 2026-06-20 12:31 IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ)ದ ವ್ಯವಸ್ಥಾಪಕ ನಿರ್ದೇಶಕರಾಗಿ IAS ಅಧಿಕಾರಿ ಶಿವಕುಮಾರ್ ಕೆ.ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಶಿವಕುಮಾರ್ ಕೆ.ಬಿ. ಅವರು ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸಮವರ್ತಿತ ಪ್ರಭಾರದಲ್ಲಿದ್ದ IAS ಅಧಿಕಾರಿ ಡಾ. ಸೆಲ್ವಮಣಿ ಆರ್. (ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ) ಅವರು ಅಧಿಕಾರ ಹಸ್ತಾಂತರಿಸಿ, ಶುಭ ಕೋರಿದರು