×
Ad

ಆ.11ರಂದು ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ: ಸಂಸದ ಬಿ.ವೈ. ರಾಘವೇಂದ್ರ

Update: 2023-06-27 18:12 IST

ಫೋಟೋ : ANI

ಶಿವಮೊಗ್ಗ:ಆಗಸ್ಟ್ 11ನೇ ತಾರೀಖಿನಂದು ಶಿವಮೊಗ್ಗದ ವಿಮಾನ ನಿಲ್ದಾಣ ಅಧಿಕೃತವಾಗಿ ವಿಮಾನ ಹಾರಾಟ ಆರಂಭಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ವಿಮಾನ ನಿಲ್ದಾಣ ಈಗಾಗಲೆ ಉದ್ಘಾಟನೆಯಾಗಿದೆ. ಆಗಸ್ಟ್ 11 ರಂದು ಅಧಿಕೃತವಾಗಿ ವಿಮಾನ ಹಾರಾಟ ಆರಂಭವಾಗಲಿದೆ. ಇದು ಅತ್ಯಂತ ಖುಷಿಯ ವಿಷಯವಾಗಿದೆ. ಈ ವಿಮಾನ ನಿಲ್ದಾಣಕ್ಕೆ ಈಗಾಗಲೇ ರಾಷ್ಟ್ರಕವಿ ಕುವೆಂಪುರವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಶಿವಮೊಗ್ಗ ರೈಲು ನಿಲ್ದಾಣಕ್ಕೆ ಕೆಳದಿ ಚೆನ್ನಮ್ಮ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಡಿಸೆಂಬರ್ ಒಳಗೆ ಮಲೆನಾಡು ಭಾಗ ಸೇರಿದಂತೆ ನೆಟ್ವರ್ಕ್ ಸಮಸ್ಯೆ ನಿವಾರಣೆಯ ನಿಟ್ಟಿನಲ್ಲಿ ಸುಮಾರು 400 ಬಿಎಸ್‌ಎನ್‌ಎಲ್ ಟವರ್‌ಗಳನ್ನು ಮುನ್ನೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News