×
Ad

ಶಿವಮೊಗ್ಗ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ನಿವಾಸದ ಮೇಲೆ ಇ.ಡಿ ದಾಳಿ

Update: 2023-10-05 09:46 IST

ಶಿವಮೊಗ್ಗ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಸರ್ಕಾರಿ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಲು ಶಸ್ತ್ರಾಸ್ತ್ರ ಸಜ್ಜಿತವಾಗಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News