×
Ad

ಶಿವಮೊಗ್ಗ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

Update: 2023-08-21 10:08 IST

ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ನಡೆದಿದೆ.

ರವಿವಾರವ ತಡರಾತ್ರಿ ಕೃತ್ಯ ನಡೆದಿದ್ದು, ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ.

ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ.

ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News