×
Ad

ಕಮಲ್ ಹಾಸನ್ ಕ್ಷಮೆಯಾಚಿಸದ್ದಿದ್ದರೆ ಸಿನೆಮಾ ಬ್ಯಾನ್ ಮಾಡಲು ಹೇಳುವೆ : ಸಚಿವ ಶಿವರಾಜ್ ತಂಗಡಗಿ

Update: 2025-05-28 18:19 IST

ಶಿವರಾಜ್ ತಂಗಡಗಿ

ಬೆಂಗಳೂರು : ಕನ್ನಡದ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿರುವ ಬಹುಭಾಷ ನಟ ಕಮಲ್ ಹಾಸನ್ ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದ್ದಿದ್ದರೆ ಅವರ ಚಿತ್ರಗಳಿಗೆ ರಾಜ್ಯದಲ್ಲಿ ನಿರ್ಬಂಧ ಹೇರುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್ ಹಾಸನ್ ಅವರು ನಟನೆ ಮಾಡಿದ್ದಾರೆ. ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಹೇರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು ಎಂದು ತಿಳಿಸಿದರು.

ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ? ಈ ಹಿಂದೆ ಗಾಯಕ ಸೋನು ನಿಗಮ್ ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು ಕ್ಷಮೆಯಾಚಿಸಿದ್ದಾರೆ. ಇವರಿಗೆಲ್ಲ ಪಾಠ ಕಲಿಸುವ ಅಗತ್ಯವಿದೆ ಎಂದು ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News