×
Ad

ಪಾಕಿಸ್ತಾನದ ಪರ ಘೋಷಣೆ ಕೂಗುವುದು ತಪ್ಪು : ಸಿಎಂ ಸಿದ್ದರಾಮಯ್ಯ

Update: 2025-04-30 14:17 IST

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

"ಮಂಗಳೂರಿನಲ್ಲಿ ಪಾಕಿಸ್ತಾನ ಝಿಂದಾಬಾದ್‌ ಎಂದು ಹೇಳಿದ ವ್ಯಕ್ತಿಯ ಕೊಲೆಯಾಗಿದೆ" ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, "ನೀನು ಅಲ್ಲಿ ಇದ್ದಿಯೇನಪ್ಪಾ?, ಪ್ರತ್ಯಕ್ಷ ಸಾಕ್ಷಿಯಾ" ಎಂದು ಪ್ರಶ್ನಿಸಿದರು.

ಮಂಗಳೂರು ನಗರದ ಹೊರವಲಯದ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದು ಸ್ಪಷ್ಟಪಡಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News