×
Ad

1991ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಮೋಸದಿಂದ ಸೋಲಿಸಲಾಯಿತು : ಸಿದ್ದರಾಮಯ್ಯ

Update: 2025-08-29 16:46 IST

ಬೆಂಗಳೂರು, ಆ. 30 : ‘1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಮೋಸದಿಂದ ಸೋಲಿಸಲಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಿನ್ನೆ ಸಂವಿಧಾನ ತಜ್ಞ ಪ್ರೊ.ರವಿವರ್ಮ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದು, ‘ನನಗೆ ಯಾವುದೇ ಕಾನೂನು ತೊಡಕು ಎದುರಾದಾಗಲೂ ಪ್ರೊ. ರವಿವರ್ಮ ಕುಮಾರ್ ಅವರ ಬಳಿ ಸಲಹೆ ಕೇಳುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

‘ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಪ್ರೊ.ರವಿವರ್ಮ ಕುಮಾರ್ ಅವರು ನನಗೆ ನೆರವಾಗಿದ್ದರು. ನನ್ನಂತೆಯೇ ಅನೇಕರಿಗೆ ಅವರು ಕಾನೂನು ನೆರವು ನೀಡಿದ್ದಾರೆ. ಅದರಲ್ಲೂ ಸಮಾಜದಲ್ಲಿ ಧ್ವನಿಯಿಲ್ಲದವರಿಗೆ ಶುಲ್ಕ ಪಡೆಯದೆಯೇ ನೆರವು ನೀಡುತ್ತಾರೆ. ಅವರ ಇಂತಹ ಒಳ್ಳೆಯ ಸಮಾಜವಾದಿ ಮನೋಭಾವ ಈಗಿನ ಯುವ ವಕೀಲರಿಗೆ ಮಾದರಿಯಾಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News