ಸಿಎಂ ಡಿ.ಕೆ.ಶಿವಕುಮಾರ್, ನೂತನ ಸಚಿವರಿಗೆ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಎಲ್ಲ ನೂತನ ಸಚಿವರುಗಳಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಹಾಕಿ ಶುಭ ಕೋರಿರುವ ಅವರು, ‘ಹಿಂದಿನ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯ ನಾಡನ್ನಾಗಿ ಕಟ್ಟಲು, ರಾಜ್ಯದ ಪ್ರತಿಯೊಬ್ಬರಿಗೂ ನ್ಯಾಯ, ಸ್ವಾತಂತ್ರ್ಯ ಹಾಗೂ ಸುರಕ್ಷತೆ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಿದ ಆತ್ಮಸಂತೃಪ್ತಿ ನನಗಿದೆ’ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಒಳಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ನ್ಯಾಯವನ್ನು ಅನುಷ್ಠಾನಕ್ಕೆ ಕೊಟ್ಟು ಕರ್ನಾಟಕ ಅಭಿವೃದ್ಧಿಯ ಹೊಸ ಮಾದರಿಯನ್ನು ಕಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರು ಎಲ್ಲರೂ ಒಗ್ಗೂಡಿ ಕರ್ನಾಟಕವನ್ನು ಇದೇ ಮಾದರಿಯ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿ ಎಂದು ಆಶಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೂ ಹಾಗೂ ಎಲ್ಲಾ ನೂತನ ಸಚಿವರುಗಳಿಗೂ ಅಭಿನಂದನೆಗಳು.
— Siddaramaiah (@siddaramaiah) June 3, 2026
ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯ ನಾಡನ್ನಾಗಿ ಕಟ್ಟಲು, ರಾಜ್ಯದ ಪ್ರತಿಯೊಬ್ಬರಿಗೂ ನ್ಯಾಯ, ಸ್ವಾತಂತ್ರ್ಯ ಹಾಗೂ ಸುರಕ್ಷತೆ ಒದಗಿಸಲು ಪ್ರಾಮಾಣಿಕ… pic.twitter.com/LdbCqWwH6X