×
Ad

"ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ": ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವೀಡಿಯೊ ವೈರಲ್

Update: 2025-07-01 20:31 IST

ಶಾಸಕ ಬಿ.ಆರ್.ಪಾಟೀಲ್ / ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರ ತೀವ್ರ ಚರ್ಚೆ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ’ ಎಂದು ಉಲ್ಲೇಖಿಸಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಡ್ಯದ ಕೆ.ಆರ್ ಪೇಟೆಯಲ್ಲಿ ತಮ್ಮ ಆಪ್ತರ ಜತೆ ದೂರವಾಣಿ ಕರೆ ಮಾಡಿರುವ ವಿಡಿಯೋ ಇದಾಗಿದ್ದು, ‘ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಮೊದಲು ಭೇಟಿ ಮಾಡಿಸಿದವನು ನಾನು. ಅವನ ಗ್ರಹಚಾರ ಚೆನ್ನಾಗಿತ್ತು ಸಿಎಂ ಆದ' ಎಂದು ಶಾಸಕ ಬಿ.ಆರ್.ಪಾಟೀಲ್ ಹೇಳಿರುವುದು ವೀಡಿಯೋದಲ್ಲಿ ಕಂಡುಬಂದಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಾಡಿ ಮಾತನಾಡಿದ್ದೇನೆ. ನನ್ನ ಮಾತನ್ನು ಗಂಭೀರವಾಗಿ ಆಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ನೋಡೋಣ ಎಂದೂ ಬಿ.ಆರ್.ಪಾಟೀಲ್ ಅವರು ದೂರವಾಣಿಯಲ್ಲಿ ಮಾತನಾಡಿರುವುದು ಸೆರೆಯಾಗಿದೆ.

‘ಕಾಂಗ್ರೆಸ್ ಪಕ್ಷದಲ್ಲಿ ನನಗೆ ಗಾಡು ಇಲ್ಲ, ಫಾದರ್ ಕೂಡ ಇಲ್ಲ’ ಎಂದು ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಉಲ್ಲೇಖ ಮಾಡಿ ಮಾತನಾಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ: ಸಿದ್ದರಾಮಯ್ಯ

ಶಾಸಕ ಬಿ.ಆರ್.ಪಾಟೀಲ್ ಹೇಳಿಕೆ ಬಗ್ಗೆ ನನಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿ ಆಯ್ಕೆಯಾಗಿದ್ದೆವು. ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ಆ ರೀತಿಯಲ್ಲಿ ಹೇಳಿಕೆ ನೀಡಿರಬಹುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News