×
Ad

ಹೈಕಮಾಂಡ್ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಉಪಹಾರಕ್ಕೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ: ಸಿಎಂ ಸಿದ್ದರಾಮಯ್ಯ

Update: 2025-11-28 22:03 IST

ಬೆಂಗಳೂರು: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಉಪಾಹಾರಕ್ಕೆ ಆಹ್ವಾನ

ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು.

ಆಹ್ವಾನ ಬಂದರೆ ದೆಹಲಿಗೆ ತೆರಳುವೆ:

ಹೊಸದಿಲ್ಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News