×
Ad

ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ: ಜಗದೀಶ್ ಶೆಟ್ಟರ್

Update: 2024-08-02 23:50 IST

ಬಿಜೆಪಿ ಸಂಸದ ಜಗದೀಶ್ ಶೆಟ್ಟರ್

ಬೆಂಗಳೂರು: ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ಥಿತಿ ಇದ್ದು, ಮುಂದೆ ರಾಜ್ಯದಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಪ್ಪು ಇರುವುದು ಎದ್ದು ಕಾಣುತ್ತದೆ. ರಾಜ್ಯಪಾಲರಿಗೆ ಖಾಸಗಿ ದೂರು ಬಂದಿದೆ. ಆ ಆಧಾರದ ಮೇಲೆ ನೋಟಿಸ್ ನೀಡಿದ್ದಾರೆ. ಮುಡಾ ಹಗರಣ ಕುರಿತು ಕ್ಯಾಬಿನೆಟ್‍ನಲ್ಲಿ ಚರ್ಚೆ ಕೂಡಾ ಆಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿಯಾಗಿರುವುದು ಕಂಡು ಬರುತ್ತದೆ ಎಂದು ತಿಳಿಸಿದರು.

ಈ ಹಗರಣದಲ್ಲಿ ರಾಜ್ಯಪಾಲರು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡಬೇಕಿದೆ. ಹಣಕಾಸು ಇಲಾಖೆ ಹಾಗೂ ಮುಖ್ಯಮಂತ್ರಿ ಅವರ ಪತ್ನಿ ಭಾಗಿಯಾಗಿರುವುದು ನೇರವಾಗಿ ಕಂಡು ಬರುತ್ತದೆ, ಇನ್ನೂ, ಸಿಬಿಐ ತನಿಖೆ ಮಾಡಲಿ ಎಂದು ಬಿಜೆಪಿ ಒತ್ತಾಯಿಸುತ್ತಿದೆ ಎಂದರು.

ನಾನು ಮೂವತ್ತು ವರ್ಷಗಳಿಂದ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದೇನೆ. ಸದನದಲ್ಲಿ ಹಗರಣವನ್ನು ಮುಖ್ಯಮಂತ್ರಿಗಳು ಎದುರಿಸಲು ಆಗಲಿಲ್ಲ. ಸ್ಪೀಕರ್ ಮೂಲಕ ರದ್ದು ಮಾಡುವ ಕೆಲಸ ಮಾಡಿದ್ದಾರೆ. ಸದನದಲ್ಲಿ ಕೊಡಬೇಕಾದ ಉತ್ತರವನ್ನು ಪತ್ರಿಕಾಗೋಷ್ಠಿ ಮೂಲಕ ನೀಡಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆಗೆ ಹಾಗೂ ಸಿಬಿಐ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News