ಡಿಸಿಎಂ ಡಾ.ಜಿ.ಪರಮೇಶ್ವರ್ (Screengrab: X/ANI)

ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ‘ಡಾ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು’ ಎಂದು ಹೇಳಿದ್ದರು. ಆದರೆ ಹೈಕಮಾಂಡ್ ಸ್ಕೀಮ್ ಬೇರೆ ಇತ್ತು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಹೈಕಮಾಂಡ್ ಗೆ ತಾನು ಒತ್ತಾಯಿಸಿರುವುದಾಗಿ ಸಿದ್ದರಾಮಯ್ಯರ ಹೇಳಿಕೆಯ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಉಪ ಮುಖ್ಯಮಂತ್ರಿ ಹುದ್ದೆಗೆ ನನ್ನ ಹೆಸರನ್ನು ಸಿದ್ದರಾಮಯ್ಯ ಶಿಪಾರಸು ಮಾಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ಹೇಳಿರುವುದು ಸತ್ಯ" ಎಂದು ಹೇಳಿದ್ದಾರೆ.

8 ವರ್ಷಗಳ ಕಾಲ ನಾನು ಪಿಸಿಸಿ ಅಧ್ಯಕ್ಷನಾಗಿದ್ದೆ. ನಂತರ ನಾನು 2015 ರಲ್ಲಿ ಗೃಹ ಸಚಿವನಾಗಿ ಅವರ ಸಂಪುಟಕ್ಕೆ ಸೇರಿದೆ. 2023 ರಲ್ಲಿ ನಾನು ಅವರ ಮಂತ್ರಿ ಮಂಡಲ ಸೇರಿದೆ. ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ, ಸಿದ್ದರಾಮಯ್ಯ ಅವರಿಗೆ ನನ್ನ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ಪರಮೇಶ್ವರ್‌ ಹೇಳಿದರು.

ನಾಗೇಂದ್ರ ರಾಜೀನಾಮೆ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಚರ್ಚೆಗೆ ಇಂದು ಅಥವಾ ನಾಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದಿಲ್ಲಿಗೆ ಹೋಗುತ್ತಾರೆ. ಹೈಕಮಾಂಡ್ ಭೇಟಿಯಾದರೆ ಅಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಬಹುದು. ಸಂಪುಟ ಪುನರ್‍ರಚನೆ ಊಹಾಪೋಹವಷ್ಟೇ. ಹೈಕಮಾಂಡ್ ತೀರ್ಮಾನದಂತೆ ಆಗುತ್ತದೆ ಎಂದು ಅವರು ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor