×
Ad

ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Update: 2023-10-28 19:55 IST

ಬೆಂಗಳೂರು, ಅ. 28: ‘ಡಾ.ಜಿ.ಪರಮೇಶ್ವರ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆಂದು ಹೇಳುವವರಿಗೆ ಬುದ್ದಿ ಇಲ್ಲ. ಮುಂದಿನ ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಿನ್ನೆ ಗೃಹ ಸಚಿವ ಡಾ.ಪರಮೇಶ್ವರ್ ಮನೆಯಲ್ಲಿ ನಾವು ಒಂದಿಷ್ಟು ಮಂದಿ ಊಟಕ್ಕೆ ಸೇರಿದ್ದೇವು. ಅದರಲ್ಲಿ ವಿಶೇಷವೇನು ಇಲ್ಲ. ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಡಿ.ಕೆ.ಶಿವಕುಮಾರ್ ಅವರನ್ನು ಭೋಜನಕೂಟಕ್ಕೆ ಆಹ್ವಾನ ನೀಡಿದಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ’ ಎಂದು ಸ್ಪಷ್ಟಣೆ ನೀಡಿದರು.

‘ಕೆಲ ಗೆಳೆಯರೆಲ್ಲರೂ ಸೇರಿ ಊಟ ಮಾಡಿದ್ದು, ಈ ವೇಳೆ ಯಾವುದೇ ರಾಜಕೀಯ ಚರ್ಚೆಯನ್ನೂ ಮಾಡಿಲ್ಲ. ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆಂದು ಹೇಳುವವರಿಗೆ ಬುದ್ದಿ ಇಲ್ಲ. ಸದ್ಯಕ್ಕೆ ಮುಖಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಲ್ಲವೇ?’ ಎಂದು ಅವರು ಪ್ರಶ್ನಿಸಿದರು. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News