×
Ad

ಲೈಂಗಿಕ ಹಗರಣ: ಪ್ರಜ್ವಲ್‌, ತಂದೆ ಎಚ್‌.ಡಿ. ರೇವಣ್ಣಗೂ SIT ನೋಟಿಸ್

Update: 2024-04-30 23:30 IST

ಬೆಂಗಳೂರು: ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಸಿಟ್ ತನಿಖಾ ತಂಡ ನೋಟಿಸ್‌ ಜಾರಿ ಮಾಡಿದ್ದು, 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಆರೋಪಿಗಳು ಖುದ್ದು ಹಾಜರಾಗಿ ಹೇಳಿಕೆ ನೀಡಬೇಕಿದೆ. ಹೀಗಾಗಿ, ನೋಟಿಸ್​ ತಲುಪಿದ 24 ಗಂಟೆಯ ಒಳಗೆ ಕಡ್ಡಾಯವಾಗಿ ಎಸ್‌ಐಟಿ ಮುಂದೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ನೋಟಿಸ್‌ನಲ್ಲಿಯೇ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಲಾಗಿತ್ತು.ಪ್ರಕರಣದಲ್ಲಿ ಆರೋಪಿಗಳ ಹೇಳಿಕೆ ಅಗತ್ಯವಿದೆ. ಹೀಗಾಗಿ, ಸಿಆರ್‌ಪಿಸಿ 41 (ಎ) ಅಡಿ ರೇವಣ್ಣ ಹಾಗೂ ಪ್ರಜ್ವಲ್‌ಗೆ ನೋಟಿಸ್ ನೀಡಲಾಗಿದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News