×
Ad

ಬಿಜೆಪಿ ಶಾಸಕ ಮುನಿರತ್ನ ಮನೆ-ಕಚೇರಿ ಮೇಲೆ ಎಸ್‌ಐಟಿ ದಾಳಿ, ಪರಿಶೀಲನೆ

Update: 2024-09-28 12:15 IST

ಮುನಿರತ್ನ

ಬೆಂಗಳೂರು : ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ, ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ  ನ್ಯಾಯಾಂಗ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಮನೆ, ಕಚೇರಿ ಮೇಲೆ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ಮುಂದುವರಿಸಿದ್ದಾರೆ.

ನಗರದ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ವಿಶೇಷ ತನಿಖಾ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.

ತಾಂತ್ರಿಕ ಸಾಕ್ಷ್ಯಾಧಾರ ಸಂಗ್ರಹಕ್ಕೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News