×
Ad

ಸೆ.22ರಿಂದ ಅ.7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಸರಕಾರ ಆದೇಶ

Update: 2025-09-19 19:59 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ.19 : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ರಾಜ್ಯದ ಎಲ್ಲ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯನ್ನು ಸೆ.22ರಿಂದ ಅ.7ರ ವರೆಗೆ ಕೈಗೊಳ್ಳಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶುಕ್ರವಾರ ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ಅಶ್ವತ್ಥ ಅವರು ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಂದೂಡಿಕೆ ಸಾಧ್ಯತೆಗಳಿವೆ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿರುವ ಆಯೋಗವು, ಈ ಕುರಿತು ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News