×
Ad

ಸೋಮಶೇಖರ್, ಶಿವರಾಂ ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು : ಆರ್.ಅಶೋಕ್

Update: 2024-05-24 20:36 IST

ಬೆಂಗಳೂರು : ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಎಸ್.ಟಿ.ಸೋಮಶೇಖರ್ ಹಾಗೂ  ಶಿವರಾಂ ಹೆಬ್ಬಾರ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಗ್ಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಗೆ ಈಗಾಗಲೆ ಪಕ್ಷದಿಂದ ನೋಟಿಸ್ ನೀಡಲಾಗಿದೆ. ಶೀಘ್ರವೇ ಹೈಕಮಾಂಡ್ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಬಿಜೆಪಿಯಲ್ಲಿ ಅಶಿಸ್ತು ಸಹಿಸುವುದಿಲ್ಲ ಎಂದು ಅಶೋಕ್ ಹೇಳಿದರು.

ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಇವರಿಬ್ಬರೂ ಬಿಜೆಪಿಯ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಅಲ್ಲದೆ, ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಚಾಲಯಿಸಿದರೆ, ಶಿವರಾಂ ಹೆಬ್ಬಾರ್ ಅನಾರೋಗ್ಯದ ನೆಪವೊಡ್ಡಿ ಮತದಾನದಿಂದ ದೂರ ಉಳಿದಿದ್ದರು.

ಲೋಕಸಭೆ ಚುನಾವಣೆಯಲ್ಲಿಯೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದ ಎಸ್.ಟಿ.ಸೋಮಶೇಖರ್, ಇದೀಗ ವಿಧಾನಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿಯೂ ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಪರವಾಗಿ ಪ್ರಚಾರ ನಡೆಸುವ ಮೂಲಕ ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News