×
Ad

ಲೈಂಗಿಕ ದೌರ್ಜನ್ಯ ಪ್ರಕರಣ | ಜಾಮೀನು ಕೋರಿ ಸೂರಜ್ ರೇವಣ್ಣ‌ ಅರ್ಜಿ ಸಲ್ಲಿಕೆ

Update: 2024-07-11 18:57 IST

ಸೂರಜ್‌ ರೇವಣ್ಣ

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರು ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜೊತೆಗೆ ಅಪ್ತ ಶಿವಕುಮಾರ್‌ ಎಂಬುವರು ದಾಖಲಿಸಿರುವ ಮತ್ತೊಂದು ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ, ಸೂರಜ್ ರೇವಣ್ಣ‌ ಪ್ರತ್ಯೇಕ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಪ್ರತಿವಾದಿ ಸಿಐಡಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜುಲೈ.12ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News