ಚೆನ್ನೈ: ಅಮಿತ್ ಶಾ ಅಧ್ಯಕ್ಷತೆಯಲ್ಲಿ ದಕ್ಷಿಣ ರಾಜ್ಯಗಳ ಸಭೆ; ಸಿಎಂ ಡಿ.ಕೆ. ಶಿವಕುಮಾರ್ ಭಾಗಿ
Update: 2026-08-20 13:54 IST
ಚೆನ್ನೈ: ತಮಿಳುನಾಡಿನ ಮಹಾಬಲಿಪುರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ದಕ್ಷಿಣ ವಲಯ ಮಂಡಳಿಯ (Southern Zonal Council) 31 ನೇ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು.
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣ ಉಪ ಮುಖ್ಯಮಂತ್ರಿ ಬಟ್ಟಿ ವಿಕ್ರಮಾರ್ಕ, ಕರ್ನಾಟಕ ಐಟಿ ಬಿಟಿ ಹಾಗೂ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ದಕ್ಷಿಣ ರಾಜ್ಯಗಳ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.