85ನೇ ಅಖಿಲ ಭಾರತ ಪೀಠಾಸೀನ ಅಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿರುವ ಸ್ಪೀಕರ್ ಯು.ಟಿ.ಖಾದರ್ ಫರೀದ್
Update: 2025-01-18 14:45 IST
ಬೆಂಗಳೂರು, ಜ. 18 :ಬಿಹಾರದ ಪಾಟ್ನಾದಲ್ಲಿ ಜನವರಿ 20 ಮತ್ತು 21ರಂದು ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನ ಅಧಿಕಾರಿಗಳ ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಭಾಗವಹಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಸಭಾಧ್ಯಕ್ಷರು "ಸಂವಿಧಾನದ 75ನೇ ವಾರ್ಷಿಕೋತ್ಸವ: ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಸಂಸ್ಥೆಗಳ ಕೊಡುಗೆಯ ಬಗ್ಗೆ ವಿಷಯ ಮಂಡಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಭಾಗವಹಿಸುವರು ಎಂದು ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.